ಪುತ್ತೂರು, ಸೆ. 27: ಕಾರು ಢಿಕ್ಕಿಯಾಗಿ ಐದು ವರ್ಷ ಪ್ರಾಯದ ಬಾಲಕ ಸಾವನ್ನಪ್ಪಿದ ಘಟನೆ ಪುತ್ತೂರು ತಾಲೂಕಿನ ಕೆಯ್ಯೂರಿನಲ್ಲಿ ಶನಿವಾರ ನಡೆದಿದೆ.
ಮೃತ ಬಾಲಕನನ್ನು ಕೆಯ್ಯೂರು ಗ್ರಾಮದ ನಿವಾಸಿ ಹಾರಿಸ್ ದಾರಿಮಿ ಎಂಬವರ ಪುತ್ರ, ಮಹಮ್ಮದ್ ಆದಿಲ್ (5) ಎಂದು ಗುರುತಿಸಲಾಗಿದೆ.
ಬಾಲಕ ಯುಕೆಜಿ ವಿದ್ಯಾರ್ಥಿಯಾಗಿದ್ದು, ಶನಿವಾರ ಮಧ್ಯಾಹ್ನ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಪುತ್ತೂರು ಕಡೆಗೆ ಹೋಗುತ್ತಿದ್ದ ಕಾರು ಬಾಲಕನಿಗೆ ಢಿಕ್ಕಿಯಾಗಿ ಬಾಲಕ ಗಂಭೀರ ಗಾಯಗೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.