ಉಳ್ಳಾಲ, ಸೆ. 28 : ಸೋಮೇಶ್ವರ ಉಚ್ಚಿಲ ಮೀನುಗಾರರ ಬಲೆಗೆ ದೈತ್ಯ ಗಾತ್ರದ ಪಿಲಿ ತೊರಕೆ ಮೀನು ಬಿದ್ದಿದೆ. ಸಮುದ್ರ ತಟದ ಸಮೀಪ ಬೀಸಿದ ಬಲೆಗೆ 75 ಕೆ.ಜಿ ಯ ಮೀನು ಬಲೆಗೆ ಬಿದ್ದಿದೆ.
ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ, ಅಝೀಝ್, ಕಲ್ಪೇಶ್ ಮತ್ತು ಶಂಭು ನ್ಯೂ ಉಚ್ಚಿಲ ಎಂಬವರು ಸಮುದ್ರ ತೀರದಲ್ಲಿ ಹಾಕಲಾಗಿದ್ದ ಬಲೆಗೆ ಮೀನು ಬಿದ್ದಿದೆ. ಈ ವರ್ಷದ ತಮ್ಮ ಮೀನುಗಾರಿಕೆಯಲ್ಲಿ ಸಿಕ್ಕ ಅತಿದೊಡ್ಡ ಮೀನು ಇದಾಗಿದೆ ಅನ್ನುವ ಅಭಿಪ್ರಾಯ ಅವರದ್ದಾಗಿದೆ.
ಈ ಬಾರಿ ದೊಡ್ಡ ಗಾತ್ರದ ಪಿಲಿತೊರಕೆ ಬಂದಿರುವುದು ಮೀನುಗಾರರಲ್ಲಿ ಉತ್ಸಾಹ ಮೂಡಿಸಿದೆ. ಸಿಕ್ಕ ಮೀನನ್ನು ವ್ಯಾಪಾರ ಮಾಡದೇ ಈದ್ ಹಬ್ಬ ಇರುವುದರಿಂದ ತಮ್ಮೊಳಗೆ ಹಂಚಿಕೊಂಡಿದ್ದಾರೆ.