ಹೈದರಾಬಾದ್, ಅ. 04: ಹೋಮ್ ವರ್ಕ್ ಮಾಡಿಲ್ಲವೆಂದು ಶಿಕ್ಷಕರೊಬ್ಬರು ವಿದ್ಯಾರ್ಥಿಯ ತಲೆಗೆ ಹೊಡೆದ ಪರಿಣಾಮ ವಿದ್ಯಾರ್ಥಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.ಖಾಸಗಿ ಶಾಲೆಯೊಂದರಲ್ಲಿ ಯುಕೆಜಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಹೇಮಂತ್ (5) ಮೃತಪಟ್ಟ ವಿದ್ಯಾರ್ಥಿ.
ಹೋಮ್ವರ್ಕ್ ಮಾಡದ ಕಾರಣಕ್ಕೆ ಶಿಕ್ಷಕನೊಬ್ಬರು ತಲೆಗೆ ಹೊಡೆದ ಪರಿಣಾಮ ವಿದ್ಯಾರ್ಥಿ ತರಗತಿಯಲ್ಲೇ ಕುಸಿದು ಬಿದ್ದಿದ್ದು, ತಕ್ಷಣ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಚಿಕಿತ್ಸೆ ಫಲಿಸದೆ ಸೋಮವಾರ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.
ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿಯ ಪೋಷಕರು ಮತ್ತು ಕುಟುಂಬ ಇತರ ಸದಸ್ಯರು ಶಾಲೆ ಮುಂದೆ ಶವದೊಂದಿಗೆ ಪ್ರತಿಭಟನೆ ನಡೆಸಿ, ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ.