ಉತ್ತರಾಖಂಡ,ಅ.09: ಬಸ್ಸೊಂದು ಕಂದಕಕ್ಕೆ ಉರುಳಿದ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 28 ಮಂದಿ ಗಾಯಗೊಂಡಿರುವ ಘಟನೆ ನೈನಿತಾಲ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.
ಘಟನೆಯಲ್ಲಿ ಐವರು ಮಹಿಳೆಯರು, ಒಬ್ಬ ಪುರುಷ ಮತ್ತು ಒಂದು ಮಗು ಸೇರಿದಂತೆ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೆ 28 ಜನರನ್ನು ರಕ್ಷಿಸಲಾಗಿದ್ದು, ಹೆಚ್ಚಿನ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಮೃತದೇಹಗಳನ್ನು ಪೊಲೀಸರಿಗೆ ಹಸ್ತಾಂತರಿಸಲಾಗಿದೆ.ಗಾಯಗೊಂಡ ಪ್ರಯಾಣಿಕರನ್ನು ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ವರದಿಯಾಗಿದೆ.