ಬೆಂಗಳೂರು, ಅ. 14 : ಬೆಂಗಳೂರಿನ ಪೈಪ್ ಲೈನ್ ರಸ್ತೆಯ ಚೋಳರಪಾಳ್ಯದಲ್ಲಿರುವ ಅಗರಬತ್ತಿ ಕಾರ್ಖಾನೆಯಲ್ಲಿ ಶನಿವಾರ ಬೆಂಕಿ ಅವಘಡ ಸಂಭವಿಸಿದೆ.
ಕಳೆದ ಐದು ವರ್ಷಗಳಿಂದ ಗುಡಿಕೈಗಾರಿಕೆ ರೀತಿ ಮನೆಯಲ್ಲೇ ಅಗರಬತ್ತಿ ಕಾರ್ಖಾನೆ ನಡೆಲಾಗುತ್ತಿ ತ್ತು. ಆಕಸ್ಮಿಕವಾಗಿ ಹತ್ತಿಕೊಂಡ ಬೆಂಕಿಯಿಂದಾಗಿ ರಾಸಾಯನಿಕಗಳಿದ್ದ ಬಾಕ್ಸ್ಗಳು ಬ್ಲಾಸ್ಟ್ ಆಗಿ ರಾಸಾಯನಿಗಳು ರಸ್ತೆಗೆ ಹರಿದ ಪರಿಣಾಮ ರಸ್ತೆಗೂ ಬೆಂಕಿ ಆವರಿಸಿದ್ದು, ಮನೆ ಮುಂದೆ ನಿಲ್ಲಿಸಿದ್ದ 8 ಬೈಕ್ಗಳು ಸುಟ್ಟು ಭಸ್ಮವಾಗಿವೆ.
ವಿಜಯನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.