ಉಳ್ಳಾಲ, ಅ. 18:ರಿಕ್ಷಾ ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೇವಂತಿ ಗುಡ್ಡೆಯಲ್ಲಿ ನಡೆದಿದೆ.
ಮೃತರನ್ನು ಕೆರೆಬೈಲು ಸೇವಂತಿಗುಡ್ಡೆ ನಿವಾಸಿ ಸಮೀರ್ (45) ಎಂದು ಗುರುತಿಸಲಾಗಿದೆ.
ತೊಕ್ಕೊಟ್ಟು ರಿಕ್ಷಾ ಪಾರ್ಕ್ ನಲ್ಲಿ ರಿಕ್ಷಾ ಚಾಲಕನಾಗಿ ದುಡಿಯುತ್ತಿದ್ದರು. ಮಂಗಳವಾರ ಬೆಳಿಗ್ಗೆ ಮನೆಯ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.