ಭಟ್ಕಳ, ಅ 24 : ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರಕ್ಕೆ ಯುವಕನೋರ್ವ ಬಲಿಯಾಗಿದ್ದಾನೆ.
ಮೃತರನ್ನು ತಲಗೋಡ್ ನಿವಾಸಿ ಪ್ರಜ್ವಲ್ ಖಾರ್ವಿ (24) ಎಂದು ಗುರುತಿಸಲಾಗಿದೆ.
ಭಟ್ಕಳದ ಬಂದರಿನಲ್ಲಿ ಮೀನುಗಾರಿಕೆ ವೃತ್ತಿ ಮಾಡುತ್ತಿದ್ದ ಪ್ರಜ್ವಲ್ ಕಳೆದ ಮೂರು ನಾಲ್ಕು ದಿನದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ,ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರಜ್ವಲ್ ಮೃತಪಟ್ಟಿದ್ದಾರೆ ಎನ್ನಲಾಗಿದೆ.