ನೇಪಾಳ, ನ. 4 : ನೇಪಾಳದಲ್ಲಿ ಶುಕ್ರವಾರ ರಾತ್ರಿ 6.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ರಾಷ್ಟ್ರೀಯ ರಾಜಧಾನಿ ಪ್ರದೇಶ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ.
ಸುದ್ದಿ ಸಂಸ್ಥೆ ರಾಯಿಟರ್ಸ್ ಪ್ರಕಾರ, ಶುಕ್ರವಾರ ಮಧ್ಯರಾತ್ರಿಯ ಮೊದಲು ವಾಯುವ್ಯ ನೇಪಾಳದ ಜಿಲ್ಲೆಗಳಲ್ಲಿ ಪ್ರಬಲ ಭೂಕಂಪ ಸಂಭವಿಸಿ ಕನಿಷ್ಠ 128 ಜನರು ಮೃತಪಟ್ಟಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.
ಭೂಕಂಪದ ಪರಿಣಾಮ ಹಲವು ಕಟ್ಟಡಗಳು ಕುಸಿದು ಬಿದ್ದಿದ್ದು, ಜನ ಅತ್ತಿತ್ತ ನೋಡಿ ತನ್ನವರನ್ನು ಹುಡುಕುತ್ತಿರುವ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಈ ಭೂಕಂಪದಿಂದ ಸಾವನಪ್ಪಿದವರ ಸಂಖ್ಯೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.