ಕಲಬುರ್ಗಿ, ನ. 10: ಆಟೋ ಮತ್ತು ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿ ಆಟೋದಲ್ಲಿದ್ದ 3 ತಿಂಗಳ ಮಗು ಸೇರಿ ಒಂದೇ ಕುಟುಂಬದ ಒಟ್ಟು 6 ಮಂದಿ ಸಾವನ್ನಪ್ಪಿದ ಘಟನೆ ಚಿತ್ತಾಪುರ ತಾಲೂಕಿನ ವಾಡಿಯ ಹಲಕರ್ಟಾ ಎಂಬಲ್ಲಿ ನಡೆದಿದೆ.
ಮೃತರನ್ನು ನಾಜ್ಮಿನ್ ಬೇಗಂ(28), ಬೀಬಿ ಫಾತಿಮಾ(12), ಅಬೂಬಕರ್(4), ಬೀಬಿ ಮರಿಯಮ್(3 ತಿಂಗಳು), ಮೊಹಮ್ಮದ್ ಪಾಷಾ(20) ಹಾಗೂ ಆಟೋ ಚಾಲಕ ಬಾಬಾ(35) ಎಂದು ಗುರುತಿಸಲಾಗಿದೆ.
ಇವರ ಜೊತೆಗಿದ್ದ ಬಾಲಕ ಮುಹಮ್ಮದ್ ಹುಸೇನ್(10) ಗಂಭೀರವಾಗಿ ಗಾಯಗೊಂಡಿದ್ದು ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಹೇಳಲಾಗಿದೆ.
ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.