ಬೆಂಗಳೂರು, ನ. 11 : ಕರ್ನಾಟಕದಲ್ಲಿ ಕಳೆದ ಕೆಲವು ತಿಂಗಳಿನಿಂದ ಭಾರೀ ಚರ್ಚೆಗೆ ಕಾರಣವಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶಿಕಾರಿಪುರ ಕ್ಷೇತ್ರದ ಶಾಸಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ಶುಕ್ರವಾರ ನೇಮಕ ಮಾಡಲಾಗಿದೆ.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹುದ್ದೆಗೆ ಬಿ.ವೈ.ವಿಜಯೇಂದ್ರ ಅವರನ್ನು ನಿಯೋಜಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಆದೇಶ ಹೊರಡಿಸಿದ್ದಾರೆ.