ಮಥುರಾ,ನ. 13 : ಉತ್ತರ ಪ್ರದೇಶದ ಮಥುರಾ ನಗರದಲ್ಲಿ ಸಂಭ್ರಮದ ಬೆಳಕಾಗುವ ಗೋಪಾಲ್ ಬಾಗ್ ಪಟಾಕಿ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಈ ಘಟನೆಯಿಂದ ಕನಿಷ್ಠ 9 ಮಂದಿಗೆ ಸುಟ್ಟ ಗಂಭೀರ ಗಾಯಗಳಾಗಿವೆ ಎಂದು ಹೇಳಲಾಗಿದೆ.
ಗೋಪಾಲಬಾಗ್ ಪ್ರದೇಶದಲ್ಲಿ ಪಟಾಕಿ ಮಾರಾಟ ಮಾಡುತ್ತಿದ್ದ ಏಳು ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾಗಿರುವ ಕುರಿತು ರಾಯಾ ಪೊಲೀಸ್ ಠಾಣೆಯ ಎಸ್ಎಚ್ಒ ಅಜಯ್ ಕಿಶೋರ್ ಅವರು ಹೇಳಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.