ಹುಬ್ಬಳ್ಳಿ, ನ.16 : ರಾಜ್ಯದಲ್ಲಿ ಮೊದಲ ಬಾರಿಗೆ ಸಾರಿಗೆ(NWKRTC) ಸಂಸ್ಥೆಯ ಬಸ್ಸುಗಳಲ್ಲಿ ಯುಪಿಐ ಪಾವತಿ ವ್ಯವಸ್ಥೆ ಮಾಡಲಾಗಿದ್ದು, ಇದು ಯಶಸ್ವಿಯಾಗಿದೆ. ಆದುದರಿಂದ ಈ ಯುಪಿಐ ಪಾವತಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಬಸ್ಸುಗಳಲ್ಲಿ ಅಳವಡಿಸಲು ಸಾಧ್ಯವಾಗಲಿದೆ.
ನವೆಂಬರ್ 1ರಿಂದ ಫೋನ್ ಪೇ ಕಂಪನಿಯ ಸಹಯೋಗದಲ್ಲಿ ಯುಪಿಐ ಮೂಲಕ ಹಣ ಸ್ವೀಕೃತಿ ವ್ಯವಸ್ಥೆಯನ್ನು ಹುಬ್ಬಳ್ಳಿ ಗ್ರಾಮಾಂತರ 3ನೇ ಘಟಕದ ಬಸ್ಸುಗಳಲ್ಲಿ ಆರಂಭಿಸಲಾಗಿದೆ.
ಪ್ರಯಾಣಿಕರು ಫೋನ್ ಪೇ, ಗೂಗಲ್ ಪೇ ಸೇರಿದಂತೆ ಯಾವುದೇ ಯುಪಿಐ ಅಪ್ಲಿಕೇಷನ್ ಮೂಲಕ ಹಣ ಪಾವತಿಸುತ್ತಿದ್ದು ಚಿಲ್ಲರೆ ಸಮಸ್ಯೆಗೆ ಪರಿಹಾರ ಸಿಕ್ಕಿದಂತಾಗಿದೆ. ಸದ್ಯ ಯುಪಿಐ ವ್ಯವಸ್ಥೆಗೆ ಸಾರ್ವಜನಿಕರಿಂದ ಹಾಗೂ ಸಿಬ್ಬಂದಿಗಳಿಂದ ನಿರೀಕ್ಷೆಗೂ ಮೀರಿದ ಸ್ಪಂದನೆ ಸಿಕ್ಕಿದೆ.
1 Comment
Pingback: soothing music