ಮಂಗಳೂರು, ನ. 17 : ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಖ್ಯಾತ ಮೂತ್ರಶಾಸ್ತ್ರದ ತಜ್ಞರು (ಯುರೋಲಜಿಸ್ಟ್) ಡಾ.ಜಿ.ಜಿ.ಲಕ್ಷ್ಮಣ ಪ್ರಭು(61) ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ಲಕ್ಷ್ಮಣ ಪ್ರಭು ಅವರು ವಾರದ ಹಿಂದೆ ಕೆಎಂಸಿ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿರುವಾಗ ಹೃದಯಾಘಾತಕ್ಕೆ ಒಳಗಾಗಿದ್ದರು. ಆ ಬಳಿಕ ಅವರು ಆಸ್ಪತ್ರೆಯಲ್ಲಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಇಂದು ಬೆಳಿಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ ಎನ್ನಲಾಗಿದೆ.