ಬೀಜಿಂಗ್: ನ. 24: ಕೋವಿಡ್-19 ಬಳಿಕ ಚೀನಾ ಈಗ ಹೊಸ ಸಾಂಕ್ರಾಮಿಕ ರೋಗದ ಭೀತಿಯಲ್ಲಿದೆ. ಚೀನಾ ದೇಶದಲ್ಲಿ ಏಕಾಏಕಿ ನಿಗೂಢವಾದ ನ್ಯುಮೋನಿಯಾ ಪ್ರಕರಣಗಳು ಹೆಚ್ಚಳವಾಗಿದೆ.
ಬೀಜಿಂಗ್ ಸೇರಿದಂತೆ ದೇಶದಾದ್ಯಂತದ ನಗರಗಳಲ್ಲಿ ನ್ಯುಮೋನಿಯಾ ಪ್ರಕರಣಗಳು ಉಲ್ಬಣಗೊಳ್ಳುತ್ತಿದೆ. ಚೀನಾದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಆಗಮಿಸುವುತ್ತಿರುವುದಾಗಿ ವರದಿಯಾಗಿದೆ.
ಬೀಜಿಂಗ್ ಮತ್ತು ಲಿಯಾನಿಂಗ್ನಲ್ಲಿರುವ ಆಸ್ಪತ್ರೆಗಳು ಅನಾರೋಗ್ಯದ ಮಕ್ಕಳಿಂದ ತುಂಬಿ ತುಳುಕುತ್ತಿವೆ. ವೈದ್ಯರು ಚಿಕಿತ್ಸೆ ನೀಡಲು ಅಗತ್ಯವಾದ ಸೌಲಭ್ಯಗಳ ಕೊರತೆಯನ್ನು ಎದುರಿಸುತ್ತಿದೆ. ಏಕಾಏಕಿ ಶಾಲೆ ಮುಚ್ಚುವ ಪರಿಸ್ಥಿತಿ ಎದುರಾಗಿದೆ ಎನ್ನಲಾಗಿದೆ.
ಚೀನಾದಲ್ಲಿ ಹಲವಾರು ಮಂದಿಗೆ, ಹೆಚ್ಚಾಗಿ ಮಕ್ಕಳಲ್ಲಿ ನಿಗೂಢ ನ್ಯುಮೋನಿಯಾ ಮಾದರಿಯ ಸಮಸ್ಯೆ ಉಂಟಾಗಿರುವುದು ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ.