ಚಿಕ್ಕಮಗಳೂರು, ನ. 27: ವಿದ್ಯುತ್ ತಂತಿಗೆ ಅಲ್ಯೂಮಿನಿಯಂ ಏಣಿ ತಗುಲಿ ಯುವಕ ಮೃತಪಟ್ಟಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಪಟ್ಟಣಗೆರೆ ಗ್ರಾಮದಲ್ಲಿ ನಡೆದಿದೆ.ಅಭಿಷೇಕ್ (27) ವಿದ್ಯುತ್ ತಂತಿಗೆ ಏಣಿ ತಗುಲಿ ಮೃತಪಟ್ಟವರು.
ಮೃತ ಅಭಿಷೇಕ್ ಭಾನುವಾರ ತೋಟದಲ್ಲಿ ತೋಟದಲ್ಲಿ ತೆಂಗಿನಕಾಯಿ ಕೀಳಲು ಒಂದು ಮರದಿಂದ ಮತ್ತೊಂದು ತೆಂಗಿನ ಮರದ ಬಳಿ ಹೋಗುವಾಗ ಅಲ್ಯುಮಿನಿಯಂ ಏಣಿಯನ್ನ ಎತ್ತಿಕೊಂಡು ಹೋಗುವಾಗ ಪ್ರೈಮರಿ ಲೈನ್ (11 ಸಾವಿರ ಕಿಲೋ ವ್ಯಾಟ್) ವಿದ್ಯುತ್ ತಂತಿಗೆ ಏಣಿ ತಗುಲಿ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.
ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.