ಮಂಗಳೂರು, ನ. 28 : ನಗರದ ಹೊರವಲಯದ ವಾಮಂಜೂರು ಸಮೀಪದ ಕೆತ್ತಿಕಲ್ನಲ್ಲಿ ಆ ಊರಿಗೆ ಹೆಸರು ಬರಲು ಕಾರಣ ಎನ್ನಲಾದ ಕಲ್ಲೊಂದು ಪತ್ತೆಯಾಗಿದೆ.
ಹಲವು ವರ್ಷಗಳಿಂದ ಗಿಡಗಂಟಿಗಳ ಎಡೆಯಲ್ಲಿ ಹುದುಗಿದ್ದ ಈ ಕಲ್ಲು ಸೋಮವಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರಸ್ತೆ ವಿಸ್ತರಣೆ ಕಾಮಗಾರಿಗಾಗಿ ಗಿಡಗಂಟಿಗಳನ್ನು ಸ್ವಚ್ಛಗೊಳಿಸಿದಾಗ ಪತ್ತೆಯಾಗಿದೆ.
ಕಲ್ಲು ಪತ್ತೆಯಾದ ವಿಷಯ ಸ್ಥಳೀಯರಿಗೆ ತಿಳಿಯುತ್ತಿದ್ದಂತೆ ಅವರು ಅಲ್ಲಿಗೆ ಹೋಗಿ ಕಲ್ಲನ್ನು ತಕ್ಷಣ ತೆರವು ಮಾಡಬಾರದು, ಈ ಕಲ್ಲಿನಲ್ಲಿ ನೂರಾರು ವರ್ಷಗಳ ಇತಿಹಾಸವಿರುವ ಮಾಹಿತಿ ಲಭಿಸಬಹುದು ಎಂಬ ಕಾರಣಕ್ಕೆ ಕಲ್ಲನ್ನು ಅದನ್ನು ಗೌರವಯುತವಾಗಿ ಸ್ಟಳಾಂತರ ಮಾಡಬೇಕು ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಲ್ಲಿ ಸ್ಥಳೀಯರು ಮನವಿ ಮಾಡಿದರು.
ಈ ಕಲ್ಲನ್ನು ಗೌರವಯುತವಾಗಿ ಬೇರೆ ಕಡೆ ಸ್ಥಳಾಂತರಿಸುವಂತೆ ಸ್ಥಳೀಯರು ಕೇಳಿಕೊಂಡರು. ಮನವಿಗೆ ಸಮ್ಮತಿಸಿದ ಎನ್ಹೆಚ್ಎಐ ಅಧಿಕಾರಿಗಳು ಕ್ರೇನ್ ಮತ್ತು ಹಗ್ಗ ಬಳಸಿ ಕಲ್ಲು ಸ್ಥಳಾಂತರಿಸುವುದಾಗಿ ಸ್ಥಳೀಯರಿಗೆ ತಿಳಿಸಿದರು.