ಬ್ರಹ್ಮಾವರ,ನ. 30 : ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬ್ರಹ್ಮಾವರದ ಧರ್ಮವರಂ ಬಳಿ ಬುಧವಾರ ನಡೆದಿದೆ
ಮೃತರನ್ನು ಬ್ರಹ್ಮಾವರದ ಹಂದಾಡಿ ಗ್ರಾಮದ ಪ್ರೀತಂ ಡಿಸಿಲ್ವಾ (31) ಎಂದು ಗುರುತಿಸಲಾಗಿದೆ.
ಪ್ರೀತಂ ಬೈಕ್ನಲ್ಲಿ ಸಂಚರಿಸುತ್ತಿದ್ದಾಗ ವೇಗವಾಗಿ ಬಂದ ಎಕ್ಸ್ಪ್ರೆಸ್ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಪ್ರೀತಂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.