ಮಂಗಳೂರು, ಡಿ. 01 : ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ವೈರಲ್ ಜ್ವರದ ಹಾವಳಿ ಹೆಚ್ಚಾಗತೊಡಗಿದ್ದು, ಜನಸಾಮಾನ್ಯರನ್ನು ಕಂಗೆಡಿಸಿವೆ.
ಕಳೆದ ಕೆಲವು ದಿನಗಳಿಂದ ಹವಾಮಾನದಲ್ಲಿ ಬದಲಾವಣೆಯಾಗಿದ್ದು, ಈ ರೀತಿಯ ವಾತಾವರಣವು ವೈರಲ್ ಜ್ವರ ಪ್ರಕರಣಗಳ ಹೆಚ್ಚಳಕ್ಕೆ ಕಾರಣವೆಂದು ಗುರುತಿಸಲಾಗಿದೆ. ಇದು ನಗರದ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಚಿಕಿತ್ಸಾಲಯಗಳಿಗೆ ಭೇಟಿ ನೀಡುವ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳಕ್ಕೆ ಕಾರಣವಾಗಿದೆ.
ಹವಾಮಾನದ ಬದಲಾವಣೆಯಿಂದ ಜನಸಾಮಾನ್ಯರ ಆರೋಗ್ಯದಲ್ಲಿ ಏರುಪೇರುಗಳಾಗಲಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.