ಬೆಳಗಾವಿ, ಡಿ, 07 : ಟಿಪ್ಪರ್ ಮತ್ತು ಕಾರಿನ ಮಧ್ಯೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಜೀವ ದಹನವಾಗಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ ನಡೆದಿದೆ.
ಬಂಬರಗಾ ಗ್ರಾಮದ ಮೋಹನ್ ಮಾರುತಿ ಬೆಳ್ಗಾಂವಕರ್(24), ಮಚ್ಚೆ ಗ್ರಾಮದ ಬಾಲಕಿ ಸಮಿಕ್ಷಾ ಡಿಯೇಕರ್(12) ಅಪಘಾತದಲ್ಲಿ ಮೃತಪಟ್ಟವರು.
ಬಂಬರಗಾ ಕ್ರಾಸ್ ಬಳಿ ಅಡ್ಡ ಬಂದ ಟಿಪ್ಪರ್ಗೆ ಕಾರು ಡಿಕ್ಕಿಯಾಗಿದೆ. ಇದರ ಪರಿಣಾಮ ಟಿಪ್ಪರ್‌ನ ಡಿಸೇಲ್ ಟ್ಯಾಂಕ್ ಒಡೆದು ಕಾರು ಮತ್ತು ಟಿಪ್ಪರ್ ಗೆ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಕಾರಿನಲ್ಲಿದ್ದ ಇಬ್ಬರು ಸಜೀವ ದಹನಗೊಂಡಿದ್ದಾರೆ. ಇನ್ನಿಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯರು ಇವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅಗ್ನಿ ಶಾಮಕ ಸಿಬ್ಬಂದಿಯವರು ಸ್ಥಳಕ್ಕೆ ದಾವಿಸಿ ಬೆಂಕಿ ನಂದಿಸಿದ್ದಾರೆ. ಕಾಕತಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಟಿಪ್ಪರ್ ಡ್ರೈವರ್ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.
1 Comment
Pingback: relaxing piano music