ಬೆಂಗಳೂರು, ಡಿ. 09 : ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗ ಹಿರಿಯ ನಟಿ ಲೀಲಾವತಿ ಶುಕ್ರವಾರ ನಿಧನರಾಗಿದ್ದಾರೆ.
ಬಹುಭಾಷಾ ನಟಿಯಾಗಿದ್ದ ಲೀಲಾವತಿಯವರು ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ ತುಳು ಚಿತ್ರಗಳಲ್ಲಿ ನಟಿಸಿದ್ದರು.
ನಟಿ ಲೀಲಾವತಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹಿರಿಯ ನಟ ದ್ವಾರಕೀಶ್ ಸೇರಿದಂತೆ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.