ಹೊಸದಿಲ್ಲಿ, ಡಿ.12: ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿದೆ.ಮೋಹನ್ ಯಾದವ್ ಅವರು ಉಜ್ಜಯಿನಿ ದಕ್ಷಿಣ ಕ್ಷೇತ್ರದಿಂದ ವಿಧಾನಸಭೆಯ ಸದಸ್ಯರಾಗಿದ್ದಾರೆ. ಇವರು 2013 ರಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಮೋಹನ್ ಯಾದವ್ ಅವರು ಇದೀಗ ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 230 ಸ್ಥಾನಗಳ ಪೈಕಿ 163 ಸ್ಥಾನಗಳನ್ನು ಗೆದ್ದ 10 ದಿನಗಳ ನಂತರ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಆಯ್ಕೆಯಾಗಿದ್ದಾರೆ.