ಜೈಪುರ್, ಡಿ. 15 : ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಬೈರ್ವಾ ಅವರು ರಾಜ್ಯದ ಉಪ ಮುಖ್ಯಮಂತ್ರಿಯನ್ನಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.
ದಿಯಾ ಕುಮಾರಿ ಮತ್ತು ಪ್ರೇಮ್ ಚಂದ್ ಬೈರ್ವಾಯವರಿಗೆ ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರು ಪ್ರಮಾಣ ವಚನ ಬೋಧಿಸಿದ್ದಾರೆ.
ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಹಲವು ಕೇಂದ್ರ ಸಚಿವರು ಭಾಗಿಯಾಗಿದ್ದರು.