ತಿರುವನಂತಪುರಂ, ಡಿ. 16 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಕೆಎಸ್‌ಆರ್‌ಟಿಸಿ ಹೆಸರು (ಟ್ರೇಡ್ ಮಾರ್ಕ್ ) ಬಳಕೆಗೆ ಯಾವುದೇ ಅಭ್ಯಂತರವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. ಕೇರಳ ರಾಜ್ಯ ಆರ್ ಟಿಸಿ ಸಲ್ಲಿಸಿದ ಮನವಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೆಎಸ್ ಆರ್ ಟಿಸಿ ಹೆಸರು ಬಳಸಬಾರದು, ಕೇರಳ ರಾಜ್ಯಕ್ಕೆ ಮಾತ್ರ ಕೆಎಸ್ ಆರ್ ಟಿಸಿ ಹೆಸರು ಬಳಸಲು ಅನುಮತಿ ನೀಡಬೇಕು ಎಂದು ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ ಮದ್ರಾಸ್ ಹೈಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿತ್ತು. ಇದೀಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಕೆಎಸ್ ಆರ್ ಟಿಸಿ ಹೆಸರು ಬಳಸಬಹುದು. ಇದಕ್ಕೆ ಯಾವುದೇ ರೀತಿಯ ಅಭ್ಯಂತರವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಸ್ಪಷ್ಟನೆ ನೀಡಿದೆ.