ಬೆಂಗಳೂರು, ಡಿ. 21 : ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಆತಂಕ ಹೆಚ್ಚಗುತ್ತಿದೆ. ರಾಜ್ಯದಲ್ಲಿ 22 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಒಬ್ಬ ವೃದ್ಧ ರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಇಲ್ಲಿಯತನಕ ಒಟ್ಟುಸಾವಿನ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.
ಪ್ರಸ್ತುತ ರಾಜ್ಯದಲ್ಲಿ 92 ಸಕ್ರಿಯ ಪ್ರಕರಣಗಳಿವೆ. 20 ಸೋಂಕಿತರು ಆಸ್ಪತ್ರೆಯಲ್ಲಿದ್ದು, ಈ ಪೈಕಿ 7 ಜನರು ಐಸಿಯುನಲ್ಲಿದ್ದಾರೆ. ಉಳಿದ 72 ಜನರು ಹೋಂ ಐಸೋಲೇಷನ್ ನಲ್ಲಿದ್ದಾರೆ. ಈಗಾಗಲೇ 5 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.