ಬೆಂಗಳೂರು, ಡಿ. 30 : ಕರ್ನಾಟಕದಲ್ಲಿ ಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು ಹೆಚ್ಚಗುತ್ತಿದ್ದು, ಈ ನಿಟ್ಟಿನಲ್ಲಿ ಜ.2 ರಿಂದ ರಾಜ್ಯದಲ್ಲಿ ಮತ್ತೆ ಲಸಿಕೆ ನೀಡಲು ಸರ್ಕಾರ ಮುಂದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕರ್ನಾಟಕ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಸಾವು ಸಂಭವಿಸುತ್ತಿದ್ದು, ಇದರಿಂದ ಆರೋಗ್ಯ ಇಲಾಖೆ ವ್ಯಾಕ್ಸಿನ್ ಮೊರೆ ಹೋಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಮತ್ತೆ ವ್ಯಾಕ್ಸಿನ್ ಡ್ರೈವ್ ಆರಂಭವಾಗಲಿದೆ.