ಟೋಕಿಯೊ, ಜ. 02 : ಜಪಾನ್ನಲ್ಲಿ ಒಂದೇ ದಿನ 155 ಬಾರಿ ಭೂಕಂಪ ಸಂಭವಿಸಿದ ಪರಿಣಾಮ 12 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಸೋಮವಾರದ 7.6 ಮತ್ತು 6 ತೀವ್ರತೆಯ ಎರಡು ಪ್ರಬಲ ಭೂಕಂಪಗಳೂ ಸಂಭವಿಸಿದ್ದು, ಭೂಕಂಪನದಿಂದ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.
ಜಪಾನ್ನಲ್ಲಿ ಭೂಕಂಪದಿಂದಾಗಿ ಕಟ್ಟಡ ಕುಸಿತಗಳು ಮತ್ತು ಬೆಂಕಿ ಸೇರಿದಂತೆ ಬಹಳ ವ್ಯಾಪಕ ಹಾನಿಯಾಗಿದೆ ಎಂದು ವಿಪತ್ತು ನಿರ್ವಹಣಾ ಸಭೆಯ ಬಳಿಕ ಪ್ರಧಾನ ಮಂತ್ರಿ ಫ್ಯೂಮಿಯೊ ಕಿಶಿಡಾ ತಿಳಿಸಿದ್ದಾರೆ.











