ಪುತ್ತೂರು, ಜ. 09: ಕಾಲೇಜು ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯಪದವು ಕನ್ನಡ್ಕದಲ್ಲಿ ರವಿವಾರ ನಡೆದಿದೆ
ಮೃತರನ್ನು ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ, ಕನ್ನಡ್ಕ ನಿವಾಸಿ, ದೀಕ್ಷಾ (16) ಎಂದು ಗುರುತಿಸಲಾಗಿದೆ.
ಮನೆಯಲ್ಲಿದ್ದ ತಂದೆ-ತಾಯಿ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡ ಸಂದರ್ಭದಲ್ಲಿ ದೀಕ್ಷಾ ಮನೆಯ ರೂಮಲ್ಲಿ ಫ್ಯಾನ್ ಗೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ.
ಈಶ್ವರಮಂಗಲ ಹೊರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.