ಶ್ರೀನಗರ, ಜ. 16 : ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಗುರುವಾರ ಲಘು ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ.
ಬೆಳಗಿನ ಜಾವ 3.49 ನಿಮಿಷಕ್ಕೆ ಭೂಮಿ ನಡುಗಿದ್ದು, ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.6 ದಾಖಲಾಗಿದೆ.
ಭೂಕಂಪನದ ಕೇಂದ್ರ ಬಿಂದು 10 ಕಿ.ಮೀ. ಆಳದಲ್ಲಿ ಪತ್ತೆಯಾಗಿದೆ. ಎಂದು ಭೂಕಂಪನಶಾಸ್ತ್ರ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
ಭೂಕಂಪದಿಂದ ಯಾವುದೇ ಅನಾಹುತಗಳ ಬಗ್ಗೆ ನಡೆದಿಲ್ಲ. ರಾತ್ರೋರಾತ್ರಿ ಭೂಮಿ ನಡುಗಿದ ಕಾರಣ ಜನರು ಭಯಭೀತರಾಗಿದ್ದಾರೆ ಎಂದು ವರದಿ ತಿಳಿಸಿದೆ.