ಆಂಧ್ರಪ್ರದೇಶ, ಜ. 17 : ಆಂಧ್ರಪ್ರದೇಶ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷೆಯಾಗಿ ವೈಎಸ್ ಶರ್ಮಿಳಾ ನೇಮಕಗೊಂಡಿದ್ದಾರೆ.
ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರನ್ನು ಮಂಗಳವಾರ ಕಾಂಗ್ರೆಸ್ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.
ಶರ್ಮಿಳಾ ಅವರು ತಮ್ಮ ವೈಎಸ್ಆರ್ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್ ಪಕ್ಷದದೊಂದಿಗೆ ವಿಲೀನಗೊಳಿಸುವುದಾಗಿ ಘೋಷಿಸಿದ್ದರಿಂದ ಜನವರಿ 4 ರಂದು ಕಾಂಗ್ರೆಸ್‌ಗೆ ಸೇರಿದ್ದಾರೆ ಎಂದು ವರದಿಯಾಗಿದೆ.