ಮಂಗಳೂರು, ಜ. 29 : ಪದವಿನಂಗಡಿ ನಿವಾಸಿ ಅಶೋಕ್ ಬಂಗೇರ ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ
ಅಶೋಕ್ ಬಂಗೇರ ಅವರು ಮಂಗಳೂರಿನ ಪದವಿನಂಗಡಿ ಬಳಿ ಇರುವ ಕೊರಗಜ್ಜನ ಸಾನಿಧ್ಯದಲ್ಲಿ ಕೊರಗಜ್ಜನ ಸೇವೆ ಮಾಡಿಕೊಂಡು ಬರುತ್ತಿದ್ದರು. ಶುಕ್ರವಾರ ರಾತ್ರಿ ರಕ್ತೇಶ್ವರಿ ನೇಮ ಆದ ಬಳಿಕ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಹಲವು ವರ್ಷಗಳಿಂದ ಅವರು ತಮ್ಮನ್ನು ದೈವಾರಾಧನೆಯಲ್ಲಿ ತೊಡಗಿಸಿಕೊಂಡಿದ್ದರು.