ಕುಂದಾಪುರ, ಫೆ. 01 : ಕರ್ನಾಟಕ ಸರಕಾರದ ಮಾಂಗಲ್ಯ ಭಾಗ್ಯ ಯೋಜನೆಯಡಿಯಲ್ಲಿ ಉಚಿತ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮವು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಬುಧವಾರ ನಡೆಯಿತು.
ಸುಬ್ರಹ್ಮಣ್ಯ ಪೂಜಾರಿ – ಅಶ್ವಿನಿ, ಅಜಿತ – ಮೂಕಾಂಬು, ವಿಠಲ – ಅನಿತ, ಅನಿಲ್ – ವಸಂತಿ, ಚಂದ್ರಶೇಖರ – ಜಲಜಾ ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.
ಈ ಸಂದರ್ಭ ವಧುವಿಗೆ 40 ಸಾವಿರ ರೂ. ಮೌಲ್ಯದ ಚಿನ್ನದ ತಾಳಿ, 2 ಚಿನ್ನದ ಗುಂಡು, ವರನಿಗೆ ಹಾರ, ಪಂಚೆ, ಶಲ್ಯ ಶರ್ಟ್ ಕೊಳ್ಳಲು 5 ಸಾವಿರ, ವಧುವಿಗೆ ಪ್ರೋತ್ಸಾಹ ಧನ(ಹೂವಿನ ಹಾರ, ಧಾರೆ ಸೀರೆ ಮತ್ತು ರವಿಕೆ ಕಣಕ್ಕಾಗಿ) ರೂ ಹತ್ತು ಸಾವಿರ ಸೇರಿದಂತೆ ಒಟ್ಟು 55 ಸಾವಿರ ಮೌಲ್ಯದ ಪ್ರೋತ್ಸಾಹಧನವನ್ನು ಪ್ರತಿ ದಂಪತಿಗಳಿಗೆ ವಿತರಿಸಲಾಯಿತು.
ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ವನಿತಾ ಉದಯ ಶೇರುಗಾರ್, ಕೊಲ್ಲೂರು ದೇವಳದ ಆಡಳಿತಾಧಿಕಾರಿ ರಶ್ಮಿ ಎಸ್. ಆರ್, ಕೊಲ್ಲೂರು ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ವೀರೇಶ್ ಮೊದಲಾದವರು ಉಪಸ್ಥಿತರಿದ್ದರು.