ಮಂಗಳೂರು, ಫೆ .12 : ಕೆಎಸ್ಸಾರ್ಟಿಸಿ ಬಸ್ ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ಅಡ್ಯಾರ್ ಸಮೀಪದ ಅರ್ಕುಳ ದ್ವಾರದ ಬಳಿ ರವಿವಾರ ನಡೆದಿದೆ. ಚರಣ್ ರಾಜ್ (34) ಮೃತಪಟ್ಟವರು.
ಚರಣ್ ರಾಜ್ ಅವರು ಒಳರಸ್ತೆಯಿಂದ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ಸಂದರ್ಭ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿಯಾಗಿ ಸವಾರ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಅವೈಜ್ಞಾನಿಕ ಕಾಮಗಾರಿಯಿಂದಾಗಿ ಪದೇ ಪದೇ ಇಂಥಹ ಅಪಘಾತಗಳು ಸಂಭವಿಸುತ್ತಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.