ಬೆಂಗಳೂರು, ಫೆ. 21 : ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ಸಿಎಚ್ ಪ್ರತಾಪ್ ರೆಡ್ಡಿ ಫೆ. 09 ರಂದು ರಾಜೀನಾಮೆ ಸಲ್ಲಿಕೆ ಮಾಡಿದ್ದು, ಇದೀಗ ಅವರ ರಾಜೀನಾಮೆಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ.
ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್ ರೆಡ್ಡಿ ವೈಯುಕ್ತಿಕ ಕಾರಣ ನೀಡಿ ರಾಜೀನಾಮೆ ನೀಡಿದ್ದು, ಇದೀಗ ಅವರ ರಾಜೀನಾಮೆಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ.
1991ರ ಬ್ಯಾಚ್ ನ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ಅವರು ಈ ವರ್ಷದ ಜೂನ್ ಕೊನೆಯ ವಾರದಲ್ಲಿ ನಿವೃತ್ತರಾಗಲಿದ್ದರು. ಹೀಗಿರುವಾಗಲೇ ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದರು.