ಮಂಗಳೂರು, ಫೆ. 22: ಬಂಟರ ಸಂಘ ಕಾವೂರು ವತಿಯಿಂದ ಮಾಲಾಡಿ ಕೋರ್ಟ್ ಮುಖ್ಯ ರಸ್ತೆಯಲ್ಲಿ ಕಾವೂರು ಬಂಟರ ಸಮುದಾಯ ಭವನದ ಭೂಮಿ ಪೂಜೆ ಮತ್ತು ಬಂಟರ ಸಂಘದ ಆಡಳಿತ ಕಚೇರಿ ಹಾಗೂ ಬಯಲು ರಂಗಮಂದಿರದ ಉದ್ಘಾಟನೆ ಬುಧವಾರ ನೆರವೇರಿತು.
ಒಡಿಯೂರು ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಸಭಾಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಬಂಟರ ಯಾನೆ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ಮಾಲಾಡಿ, ಸಂಸದ ನಳಿನ್ ಕುಮಾರ್ ಕಟೀಲು ,ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಎಂಆರ್‌ಜಿ ಗ್ರೂಪ್ ಆಡಳಿತ ನಿರ್ದೇಶಕ ಕೆ. ಪ್ರಕಾಶ್ ಶೆಟ್ಟಿ,ಹೇರಂಬ ಇಂಡಸ್ಟ್ರೀಸ್ ಮುಂಬಯಿಯ ಆಡಳಿತ ನಿರ್ದೇಶಕ ಕನ್ಯಾನ ಸದಾಶಿವ ಶೆಟ್ಟಿ, ಸಾಯಿರಾಧಾ ಗ್ರೂಪ್ನ ಆಡಳಿತ ನಿರ್ದೇಶಕ ಮನೋಹರ ಎಸ್. ಶೆಟ್ಟಿ, ಮಾಜಿ ಸಚಿವರಾದ ಬಿ.ನಾಗರಾಜ ಶೆಟ್ಟಿ ಬಿ.ರಮಾನಾಥ ರೈ, ಮನಪಾಸದಸ್ಯರಾದ ಅನಿಲ್ ಕುಮಾರ್, ಸುಮಂಗಲಾ ರಾವ್,ಮಂಗಳೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ರವಿರಾಜ್ ಶೆಟ್ಟಿ ನಿಟ್ಟೆಗುತ್ತು, ತಾಲೂಕು ಸಮಿತಿ ಸಂಚಾಲಕ ವಸಂತ ಶೆಟ್ಟಿ, ಕಟೀಲ್ ಡೆವಲಪರ್ನ ಮಾಲಕ ಗಿರೀಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.