ಉಡುಪಿ, ಫೆ 23 : ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ ಆಳಸಮುದ್ರ ದೋಣಿ ಮಹಾರಾಷ್ಟ್ರದ ರತ್ನಗಿರಿಯಲ್ಲಿ ಮುಳುಗಡೆಯಾಗಿದೆ, ದೋಣಿಲ್ಲಿದ್ದ 7 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ.
ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಪ್ರಕಾಶ್ ದೇವಾಡಿಗ ಅವರಿಗೆ ಸೇರಿದ್ದು, ಆನಂತಕೃಷ್ಣ ಬೋಟು ರತ್ನಗಿರಿ ಸಮೀಪ ಮೀನುಗಾರಿಕೆ ನಡೆಸುತ್ತಿರುವಾಗ ಬೋಟಿನ ಒಳಗೆ ನೀರು ಬರಲಾರಂಭಿಸಿದ್ದು, ಕೂಡಲೇ ಸಮೀಪದಲ್ಲಿದ್ದ ಮೀನಾಕ್ಷಿ ಮತ್ತು ಗಾಯತ್ರಿ ರಕ್ಷಾ ಬೋಟಿನವರು ಬೋಟಿನಲ್ಲಿದ್ದ 7 ಮಂದಿಯನ್ನು ರಕ್ಷಿಸಿದ್ದಾರೆ ಎಂದು ಹೇಳಲಾಗಿದೆ.