ಚಿತ್ರದುರ್ಗ, ಮಾ.0 7: ಚಾಕೊಲೇಟ್ ಎಂದು ಭಾವಿಸಿ ಮಾತ್ರೆ ಸೇವಿಸಿ 4 ವರ್ಷದ ಮಗು ಮೃತಪಟ್ಟ ಘಟನೆ ಚಿತ್ರದುರ್ಗದ ಕಡಬನಕಟ್ಟೆ ಗ್ರಾಮದಲ್ಲಿ ನಡೆದಿದೆ.ಹೃತ್ವಿಕ್ (4) ಮೃತಪಟ್ಟ ಮಗು,
ಇತ್ತೀಚೆಗೆ ಮೃತ ಮಗುವಿನ ತಾಯಿ ಪವಿತ್ರಾ ಎಂಬುವವರಿಗೆ ಶಸ್ತ್ರಚಿಕಿತ್ಸೆಯೊಂದು ನಡೆದಿತ್ತು. ಈ ಹಿನ್ನಲೆ ವೈದ್ಯರು ನೀಡಿದ್ದ ಮಾತ್ರೆಗಳನ್ನು ಮನೆಯಲ್ಲಿಟ್ಟಿದ್ದರು. ಮಗು ಆಟವಾಡುತ್ತಿತ್ತು. ಅಕಸ್ಮಾತ್ ಆಗಿ ಚಾಕೊಲೇಟ್ ಎಂದು ಭಾವಿಸಿ ಮಾತ್ರೆಗಳನ್ನು ಸೇವಿಸಿ ಮಗು ಸಾವನ್ನಪ್ಪಿದೆ ಎಂದು ಹೇಳಲಾಗಿದೆ.
ತುರುವನೂರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.