ಮಂಗಳೂರು, ಮಾ. 14: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ್ ಪಡೆದಿದ್ದಾರೆ.ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿ ಸ್ವಯಂನಿವೃತ್ತಿ ಪಡೆದುಕೊಂಡಿದ್ದ ಕ್ಯಾ. ಬ್ರಿಜೇಶ್ ಚೌಟ ಈಗ ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯದರ್ಶಿಯೂ ಆಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಬಿಜೆಪಿ ಹೈಕಮಾಂಡ್ ದ. ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ್ ನೀಡಿದ್ದು ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಗೆ ಕೊಕ್ ನೀಡಿದೆ.