ಬಂಟ್ವಾಳ, ಮಾ 21: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ತೌಹೀದ್ ಶಾಲಾ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೃತ ವಿದ್ಯಾರ್ಥಿನಿಯನ್ನು ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್, ತಲಪಾಡಿಯ ಸಫೀರ್ ಅಹ್ಮದ್ ಎಂಬವರ ಮಗಳು ಆಯಿಷಾ ಶಹಿಮ (7) ಎಂದು ಗುರುತಿಸಲಾಗಿದೆ.
ಶಹಿಮಾ ಅವರು 3 ವಾರಗಳ ಹಿಂದೆ ಮನೆಯಲ್ಲಿ ಕುಸಿದುಬಿದ್ದಿದ್ದರು. ಈ ವೇಳೆ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ಮೂರು ದಿನ ಕೋಮದಲ್ಲಿದ್ದರು. ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.