ಉಳ್ಳಾಲ, ಮಾ. 25: ಬೈಕ್ ಅಪಘಾತ ಸಂಭವಿಸಿ ಸಹಸವಾರೆ ವಿವಾಹಿತ ಮಹಿಳೆ ಸಾವನ್ನಪ್ಪಿ, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಳ್ಳಾಲದ ನಾಟೆಕಲ್ ಸಮೀಪ ರವಿವಾರ ನಡೆದಿದೆ.
ಬೋಂದೇಲ್ ದೀಕ್ಷಿತ್ ಎಂಬವರ ಪತ್ನಿ ನಿಧಿ (29) ಸಾವನ್ನಪ್ಪಿದವರು. ಸವಾರ ಯತೀಶ್ ದೇವಾಡಿಗ ಗಂಭೀರವಾಗಿ ಗಾಯಗೊಂಡಿದ್ದು, ಉಳ್ಳಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ..
ಇಬ್ಬರು ಮುಡಿಪುವಿನಲ್ಲಿನ ಸಂಬಂಧಿಕರ ಗೃಹಪ್ರವೇಶಕ್ಕೆ ತೆರಳಿ ಬೈಕ್ನಲ್ಲಿ ವಾಪಸ್ಸಾಗುವ ಸಂದರ್ಭ ಸವಾರನ ನಿಯಂತ್ರಣ ತಪ್ಪಿ ನಾಟೆಕಲ್ ಗ್ರೀನ್ ಗ್ರೌಂಡ್ ಸಮೀಪ ಡಿವೈಡರ್ ಗೆ ಬಡಿದು ಈ ಘಟನೆ ನಡೆದಿದೆ. ಶ್ರೀನಿಧಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಯತೀಶ್ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.