ಕಾಪು, ಮಾ. 30 : ಕಾಪು ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು ಪೊಲೀಸ್ ಕ್ವಾರ್ಟರ್ಸ್ನಲ್ಲಿ ನೇಣಿಗೆ ಶರಣಾದ ಘಟನೆ ಶನಿವಾರ ನಡೆದಿದೆ.
ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಾಗಲಕೋಟೆ ಮೂಲದ ಜ್ಯೋತಿ (29) ಎಂದು ಗುರುತಿಸಲಾಗಿದೆ.
ಶುಕ್ರವಾರ ಎಂದಿನಂತೆ ಕರ್ತವ್ಯ ನಿರ್ವಹಿಸಿದ್ದ ಅವರು ರಾತ್ರಿ ಕ್ವಾಟ್ರಸ್ ಗೆ ಮರಳಿದ್ದು ಶನಿವಾರ ಬೆಳಿಗ್ಗೆ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.