ಮಂಗಳೂರು,ಏ.17 : ಪ್ರಧಾನಿ ನರೇಂದ್ರ ಮೋದಿಯವರುಮೋದಿಯವರು ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗುರುಗಳಿಗೆ ದೊಡ್ಡ ಗೌರವ ಸಲ್ಲಿಸಿದ್ದಾರೆ. ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಒಳ್ಳೆಯ ನಿರ್ಧಾರ ಕೈಗೊಂಡ ಪ್ರಧಾನಿ ಅವರಿಗೆ ಅಭಿನಂದನೆಗಳು ಎಂದು ಮಂಗಳವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ದ. ಕ. ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಅವರು ಹೇಳಿದರು.
ನಾರಾಯಣಗುರುಗಳ ಪ್ರತಿಮೆಗೆ ಪ್ರಧಾನಿ ಮಾಲಾರ್ಪಣೆ ಮಾಡಿದ್ದು ಚುನಾವಣಾ ಗಿಮಿಕ್ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಹೇಳಿಕೆಗೆ ಪ್ರತಿಕ್ರಯಿಸಿದ ಸತೀಶ್ ಕುಂಪಲ ಅವರು, ಪ್ರಧಾನಿಯವರ ಕಾರ್ಯಕ್ರಮಕ್ಕೂ ಮುನ್ನವೇ ಕಾಂಗ್ರೆಸ್ನವರು ಮುಖ್ಯಮಂತ್ರಿಯವರನ್ನು ಕರೆಸಿ ನಾರಾಯಣಗುರುಗಳಿಗೆ ಮಾಲಾರ್ಪಣೆ ಮಾಡಿಸಬಹುದಿತ್ತು. ಮಾಲಾರ್ಪಣೆ ಮಾಡಿದ್ದನ್ನು ಪ್ರಶ್ನೆ ಮಾಡಬಾರದು. ಜಗತ್ತಿನ ಶ್ರೇಷ್ಠ ಮಾನವತಾವಾದಿಗೆ ಗೌರವ ಕೊಡುವ ವಿಚಾರದಲ್ಲಿ ಕಾಂಗ್ರೆಸ್‌ನವರು ಪ್ರಶ್ನಿಸಬಾರದು ಎಂದು ಸತೀಶ್ ಕುಂಪಲ ಹೇಳಿದರು.