ಬೆಳ್ತಂಗಡಿ, ಮೇ.9 :ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ, ಬೆಳ್ತಂಗಡಿ ಗುರುದೇವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಕೆ. ಬಂಗೇರ (79) ಮೇ 8, ಬುಧವಾರ ನಿಧನರಾಗಿದ್ದಾರೆ.
ದೀರ್ಘ ಕಾಲದ ಆನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ನಾಯಕ ವಸಂತ ಬಂಗೇರ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
1972 ರಲ್ಲಿ ಕುವೆಟ್ಟು ಗ್ರಾಮ ಪಂಚಾಯತ್ನ ಚುನಾವಣೆಯಲ್ಲಿ ಅವಿರೋಧವಾಗಿ ಸದಸ್ಯರಾಗಿ ಆಯ್ಕೆಯಾಗಿ ನಂತರ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ವಿಧಾನಸಭೆಗೆ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1983 ಮತ್ತು 1985ರಲ್ಲಿ ವಸಂತ ಬಂಗೇರ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದು ಶಾಸಕರಾಗಿ ಆಯ್ಕೆಯಾಗಿದ್ದರು. 2013ರಲ್ಲಿ ವಸಂತ ಬಂಗೇರ ಕಾಂಗ್ರೆಸ್ನಿಂದ ಸ್ಪರ್ಧಿಸಿ ಗೆದ್ದು ಶಾಸಕರಾಗಿ ಆಯ್ಕೆಯಾಗಿದ್ದರು. ತಮ್ಮ ರಾಜಕೀಯ ಜೀವನದಲ್ಲಿ ಅವರು ಬಿಜೆಪಿ, ಜನತಾದಳ ಹಾಗೂ ಕಾಂಗ್ರೆಸ್ ಸೇರಿದಂತೆ ಮೂರು ಪಕ್ಷದಲ್ಲಿಗುರುತಿಸಿಕೊಂಡಿದ್ದರು.











