ಮುಂಬೈ, ಮೇ. 14: ಅನಧಿಕೃತ ಜಾಹೀರಾತು ಫಲಕವೊಂದು ಪೆಟ್ರೋಲ್ ಪಂಪ್ ಮೇಲೆ ಬಿದ್ದ ಪರಿಣಾಮ 14 ಮಂದಿ ಮೃತಪಟ್ಟ ಘಟನೆ ಮುಂಬೈನ ಘಾಟ್ಕೋಪರ್ನಲ್ಲಿ ಸೋಮವಾರ ನಡೆದಿದೆ.
ಗಾಳಿ ಸಹಿತ ಮಳೆಯಿಂದಾಗಿ ಪೆಟ್ರೋಲ್ ಪಂಪ್ ಎದುರಲ್ಲಿದ್ದ ಬೃಹತ್ ಜಾಹೀರಾತು ಫಲಕ ಕುಸಿದು ಪೆಟ್ರೋಲ್ ಪಂಪ್ ಸಮೀಪ ನಿಂತಿದ್ದ ಕಾರುಗಳ ಮೇಲೆ ಬಿದ್ದಿದೆ. ಈ ಪರಿಣಾಮ 14 ಮಂದಿ ಮೃತಪಟ್ಟು, 74 ಮಂದಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಾಗಿಸಲಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳುಗಳಲ್ಲಿ 35 ಮಂದಿ ಬಿಡುಗಡೆಗೊಂಡಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.