ಟೆಹ್ರಾನ್, ಮೇ 20 : ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರಿದ್ದ ಹೆಲಿಕಾಪ್ಟರ್ ಪರ್ವತ ಶ್ರೇಣಿಗಳ ನಡುವೆ ಭಾನುವಾರ ಪತನಗೊಂಡಿದ್ದು, ಈ ಅಪಘಾತದಲ್ಲಿ ಅವರು ಸಾವನ್ನಪ್ಪಿರುವುದಾಗಿ ಇರಾನ್ ಮಾಧ್ಯಮಗಳಲ್ಲಿ ವರದಿಯಾಗಿದೆ.
ಹೆಲಿಕಾಪ್ಟರ್ ಅಪಘಾತದಲ್ಲಿ ವಿದೇಶಾಂಗ ಸಚಿವ ಹುಸೇನ್ ಅಮೀರ್ ಅಬ್ದುಲ್ಲಾಹಿಯಾನ್, ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದ ಗವರ್ನರ್ ಮಾಲೆಕ್ ರಹಮತಿ, ತಬ್ರಿಜ್ನ ಇಮಾಮ್ ಮೊಹಮ್ಮದ್ ಅಲಿ ಅಲೆಹಶೆಮ್, ಪೈಲಟ್, ಕೋ ಪೈಲಟ್, ಸಿಬ್ಬಂದಿ ಮುಖ್ಯಸ್ಥ, ಭದ್ರತಾ ಮುಖ್ಯಸ್ಥ ಹಾಗೂ ಗನ್ಮ್ಯಾನ್ಗಳು ಕೂಡ ಪ್ರಯಾಣಿಸುತ್ತಿದ್ದರು. ಈ ಅವಘಡದಲ್ಲಿ ಅವರೆಲ್ಲರೂ ಕೂಡ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.