ಬೆಳ್ತಂಗಡಿ, ಮೇ 26 : ಮನೆಯ ಕೆರೆಗೆ ಜಾರಿ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಶನಿವಾರ ಬೆಳ್ತಂಗಡಿ ಗರ್ಡಾಡಿಯ ನಂದಿಬೆಟ್ಟದಲ್ಲಿ ನಡೆದಿದೆ.
ಮೃತರನ್ನು ಶೈಲೇಶ್ ಶೆಟ್ಟಿ(38) ಎಂದು ಗುರುತಿಸಲಾಗಿದೆ.
ಶೈಲೇಶ್ ಅವರು ಮನೆಯ ಕೆರೆಗೆ ಜಾರಿ ಬಿದ್ದು ಕೆಸರಿನಲ್ಲಿ ಮುಳುಗಿದ ಪರಿಣಾಮ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿದ್ದಾರೆ.