ದಮಾಮ್, ಮೇ 27: ಸೌದಿ ಅರೇಬಿಯಾದ ದಮಾಮ್ ನಲ್ಲಿ ನೆಲೆಸಿರುವ ಕರಾವಳಿ ಮೂಲದ ಅನಿವಾಸಿ ಭಾರತೀಯ ಕುಟುಂಬವೊಂದು ವಾಸಿಸುತ್ತಿದ್ದ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿ, ಮೂರು ವರ್ಷದ ಮಗುವೊಂದು ಸಾವನ್ನಪ್ಪಿದ ಘಟನೆ ಶನಿವಾರ ರಾತ್ರಿ ನಡೆದಿದೆ.
ಅದಮಾದ ಅದಮಾ ಎಂಬಲ್ಲಿಯ ಲುಲು ಮಾಲ್ ಹಿಂಭಾಗದಲ್ಲಿರುವ ಅಲ್ ಹುಸೇನಿ ಕಾಂಪೌಂಡ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೂಡಬಿದಿರೆಯ ಕೋಟೆಬಾಗಿಲು ಮೂಲದ ಶೇಖ್ ಫಹದ್ ಎಂಬವರ ಮಗು ಸಾಯಿಕ್ ಶೇಖ್ (2) ಸಾವನ್ನಪ್ಪಿದೆ.
ಶೇಖ್ ಫಹದ್ ಮತ್ತು ಅವರ ಪತ್ನಿ ಸಲ್ಮಾ ಕಾಝಿ ಮತ್ತು ಇನ್ನೋರ್ವ ಪುತ್ರ ಶಾಹಿದ್ ಶೇಖ್(6) ಹೊಗೆಯಿಂದ ತೀವ್ರವಾಗಿ ಅಸ್ವಸ್ಥರಾಗಿದ್ದು ಅವರನ್ನು ಸಮೀಪದ ನಿವಾಸಿಗಳು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.