ಮಂಗಳೂರು, ಜೂ.1: ಶಾಲಾ ಕಟ್ಟಡ ಕಾಮಗಾರಿಯ ವೇಳೆ ಕಾರ್ಮಿಕರೊಬ್ಬರು ಆಯತಪ್ಪಿ ಬಿದ್ದು ಮೃತಪಟ್ಟ ಬಗ್ಗೆ ಮೂಡುಬಿದಿರೆಯಲ್ಲಿ ನಡೆದಿದೆ ಮೃತರನ್ನು ಸುರೇಶ್ ಎಂದು ಗುರುತಿಸಲಾಗಿದೆ
ಗುರುವಾರ ಸುರೇಶ್ ಮೂಡುಬಿದಿರೆಯ ಪ್ರಾಂತ್ಯ ಗ್ರಾಮದ ಹನುಮಾನ್ ದೇವಸ್ಥಾನದ ಬಳಿಯ ಸರಕಾರಿ ಶಾಲೆಯ ಶಾಲಾ ಕಟ್ಟಡದ ಕೆಲಸ ಮಾಡುತ್ತಿದ್ದರು. ಈ ವೇಳೆ ಹಲಗೆ ಜಾರಿ ಸುರೇಶ್ ಬಿದ್ದು, ಗಂಭೀರ ಗಾಯಗೊಂಡು ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.