ಬಂಟ್ವಾಳ, ಜೂ. 08: ದ್ವಿಚಕ್ರ ವಾಹನಕ್ಕೆ ಲಾರಿಯೊಂದು ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಮೃತಪಟ್ಟ ಘಟನೆ ಸಜೀಪ ಮುನ್ನೂರು ಗ್ರಾಮದ ಕಂದೂರು ಎಂಬಲ್ಲಿ ಶನಿವಾರ ನಡೆದಿದೆ.
ಅಮ್ಟಾಡಿ ಗ್ರಾಮದ ಕಲಾಯಿ ನಿವಾಸಿ ರಾಮನಾಯ್ಕ (47) ಮೃತಪಟ್ಟ ವ್ಯಕ್ತಿ.
ರಾಮನಾಯ್ಕ ಅವರು ಸ್ಕೂಟರ್‌ನಲ್ಲಿ ಬಿಸಿರೋಡಿನಿಂದ ಮುಡಿಪು ಕಡೆಗೆ ತೆರಳುತ್ತಿದ್ದ ವೇಳೆ ಅತೀ ವೇಗದಲ್ಲಿ ಬಂದ ಲಾರಿ ಸ್ಕೂಟರ್‌ಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದಿದ್ದು, ಢಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್.ಐ ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.