ಮಂಗಳೂರು, ಜೂ. 20 : ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ದೇವಿಕಾ ಯೋಗ ಕ್ಲಾಸ್ ಕೇಂದ್ರದ ನಿರ್ದೇಶಕಿ ದೇವಿಕಾ ಪುರುಷೋತ್ತಮ್ ಇವರ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಶುಕ್ರವಾರ ನಡೆಯಿತು.
ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ಚೇರ್ಮನ್ ಸಿಎ ಶಾಂತರಾಮ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದರು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಪ್ರೆಸ್ ಕ್ಲಬ್ ಕಾರ್ಯಕಾರಿ ಸಮಿತಿ ಸದಸ್ಯ ದಯಾ ಕುಕ್ಕಾಜೆ, ಹಿರಿಯ ಪತ್ರಕರ್ತರಾದ ವಿದ್ಯಾಧರ ಶೆಟ್ಟಿ, ಗಿರಿಧರ ಶೆಟ್ಟಿ, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಉಪಸ್ಥಿತರಿದ್ದರು.