ಕಾರ್ಕಳ, ಜೂ. 23 : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿ ಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಬೆಳ್ಮಣ್ ಸಮೀಪದ ನಂದಳಿಕೆ ಕ್ರಾಸ್ ರಸ್ತೆಯಲ್ಲಿ ನಡೆದಿದೆ.
ನಂದಳಿಕೆ ನಿವಾಸಿ ಪ್ರಣಮ್ಯ ಶೆಟ್ಟಿ (14) ಮೃತ ವಿದ್ಯಾರ್ಥಿನಿ.
ಪ್ರಣಮ್ಯ ಶೆಟ್ಟಿ ಹೆದ್ದಾರಿ ಬದಿಯಲ್ಲಿ ಸಂಜೆಯ ವೇಳೆಯಲ್ಲಿ ನಡೆದುಕೊಂಡು ಹೋಗುವ ಸಂದರ್ಭದಲ್ಲಿ ವೇಗವಾಗಿ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಪಾದಚಾರಿ ಪ್ರಣಮ್ಯ ಶೆಟ್ಟಿ ಗಂಭೀರ ಗಾಯಗೊಂಡಿದ್ದು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.